ತಿಂಗಳೊಳಗೆ ಹಂತಕರನ್ನು ಬಂಧಿಸಿ !

Kannada News

09-09-2017

ಹಾಸನ: ಪತ್ರಕರ್ತೆ,ಸಾಮಾಜಿಕ ಹೋರಾಟಗಾರ್ತಿ,ಚಿಂತಕಿ, ಗೌರಿಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳನ್ನು ತಿಂಗಳೊಳಗೆ ಪತ್ತೆ ಹಚ್ಚಿ ಬಂಧಿಸ ಬೇಕು ಎಂದು ಪ್ರಗತಿಪರ ಸಂಘಟನೆಗಳು ಒತ್ತಾಯಿಸಿವೆ. ಹಾಸನದಲ್ಲಿ ಮಾತನಾಡಿದ ಖ್ಯಾತ ಸಾಹಿತಿ ಬಾನುಮುಸ್ತಾಕ್, ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿ ಆರೋಪಿಗಳನ್ನು ಬಂಧಿಸಬೇಕು ಎಂದರು. ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಖಂಡನಾ ಸಮಾವೇಶದಲ್ಲಿ, ಜಿಲ್ಲೆಯ ಹಲವು ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದರು. ಅಗಲಿದ ಗೌರಿಲಂಕೇಶ್ ಅವರಿಗೆ ಸಂತಾಪ ಸೂಚಕ ಸಭೆ ನಡೆಸದ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಧೋರಣೆಯನ್ನು ಖಂಡಿಸಿದರು. ಅಲ್ಲದೇ ಡಾ.ಕಲಬುರ್ಗಿಯವರ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದರು. ಸಾಹಿತಿ ರೂಪ ಹಾಸನ್, ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೊಟ್ಟೂರು ಶ್ರೀನಿವಾಸ್,ಸಿಪಿಎಂ ಕಾರ್ಯದರ್ಶಿ ಧರ್ಮೇಶ್ ಈ ಸಂದರ್ಭ ಉಪಸ್ಥಿತರಿದ್ದರು.

 

 

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ