ಗೌರಿ ಹತ್ಯೆ: ಬಿಟ್ಟಿ ಸಲಹೆಗಳ ಮಹಾಪೂರ !

Kannada News

11-09-2017

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರಿಗೆ ಬಿಟ್ಟಿ ಸಲಹೆಗಳ ಮಹಾಪೂರವೇ ಹರಿದುಬಂದಿದೆ. ಮಾಹಿತಿ ಕೋರಿ ನೀಡಿದ್ದ ನಂಬರ್ ಗೆ ಕರೆ ಮಾಡಿ ಸಲಹೆಗಳು ನೀಡಿದ್ದಾರೆ. ಪೊಲೀಸರು ನೀಡಿದ್ದ ನಂಬರ್ ಗೆ 300ಕ್ಕೂ ಹೆಚ್ಚು ಕರೆಗಳು ಬಂದಿದ್ದು, 300 ಕರೆಗಳಲ್ಲಿ ಇಬ್ಬರಿಂದ ಮಾತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.  ಬಲ ಪಂಥೀಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಮತ್ತು ಎಡ ಪಂಥೀಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಎಂಬ ಸಲಹೆಗಳು, ಸ್ಥಳೀಯ ರೌಡಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿ, ಸಿಸಿಟಿವಿ ದೃಶ್ಯ ಪರಿಶೀಲಿಸಿ ಎಂದು ಪೊಲೀಸರಿಗೆ ಸಲಹೆ ನೀಡಿದ್ದಾರೆ. ಇನ್ನು ಇಬ್ಬರು ನೀಡಿರುವ ಮಾಹಿತಿ ಪರಿಗಣಿಸಿರುವ ಪೊಲೀಸರು, ಪ್ರಕರಣದ ತನಿಖೆ ಮುಂದುವರಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ