ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ !

Kannada News

11-09-2017 285

ದಾವಣಗೆರೆ: ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆಯು, ದಾವಣಗೆರೆ ತಾಲ್ಲೂಕು, ಬಾತಿ ಗ್ರಾಮದಲ್ಲಿ ನಡೆದಿದೆ. ಪ್ರಜ್ವಲ್ (14) ನೇಣು ಬಿಗಿದುಕೊಂಡ ವಿದ್ಯಾರ್ಥಿ. ಬಾತಿ ಗ್ರಾಮದ ಬಳಿ ಇರುವ ಮಂದಾರ ವಸತಿ ಶಾಲೆಯಲ್ಲಿ ಪ್ರಜ್ವಲ್ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಬಾಲಕ ಪ್ರಜ್ವಲ್ ನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ಸಂಭವಿಸಿದೆ.




ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ