ಭೀಕರ ರಸ್ತೆ ಅಪಘಾತ: ದಂಪತಿ ಸಾವು !

Kannada News

11-09-2017

ಧಾರವಾಡ: ಭೀಕರ ರಸ್ತೆ ಅಪಘಾತದಲ್ಲಿ, ದಂಪತಿ ಸಾವನ್ನಪ್ಪಿರುವ ದಾರುಣ ಘಟನೆಯು, ಧಾರವಾಡದಲ್ಲಿ ನಡೆದಿದೆ. ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಧಾರವಾಡದ ಕೃಷಿ ವಿ.ವಿ ಬಳಿ ಈ ದುರ್ಘಟನೆ ಸಂಭವಿಸಿದ್ದು, ಗುರುಪಾದ ಗೊಡಚಿ(37) ಹಾಗೂ ಆತನ ಪತ್ನಿ ಮೃತ ದುರ್ದೈವಿಗಳು. ಮೃತರನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ನಿವಾಸಿಗಳು ಎಂದು ಗುರುತಿಸಲಾಗಿದೆ. ಇನ್ನು ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹಗಳನ್ನು ರವಾನಿಸಲಾಗಿದ್ದು, ಧಾರವಾಡ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


Good
  • Raghu c
  • Drivar