ದೇವಾಲಯಗಳಿಗೆ ಕನ್ನ: ಕಳ್ಳನ ಸೆರೆ !

Kannada News

11-09-2017

ಮಂಡ್ಯ: ದೇವಾಲಯಗಳಲ್ಲಿ ಕದಿಯುತ್ತಿದ್ದ ಕಳ್ಳನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ನಿವಾಸಿ ಶ್ಯಾಮ್(35) ಬಂಧಿತ ಆರೋಪಿ. ಮಂಡ್ಯ ಜಿಲ್ಲೆ, ಮಳವಳ್ಳಿ ಪೊಲೀಸರು ಕಳ್ಳನನ್ನು ಬಂಧಿಸಿದ್ದಾರೆ. ಕಳೆದ ಆಗಸ್ಟ್ 27 ರಂದು, ಮಳವಳ್ಳಿಯ ಮಾರೇಹಳ್ಳಿ ಬಳಿ ಇರುವ ಬೀರೇಶ್ವರ ದೇವಸ್ಥಾನದಲ್ಲಿ,  ದೇವರ ಚಿನ್ನಾಭರಣಗಳನ್ನು ಆರೋಪಿ ಕಳ್ಳತನ ಮಾಡಿದ್ದ. ಪ್ರಕರಣ ಬೆನ್ನತ್ತಿದ ಪೊಲೀಸರು ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ದೇವರ ಒಡವೆಗಳನ್ನು ವಶಕ್ಕೆ ಪಡೆದಿದ್ದಾರೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳನನ್ನು ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ