ಬ್ಯಾಂಕ್ ಗೆ ಬೀಗ ಜಡಿದು ಪ್ರತಿಭಟನೆ !

Kannada News

11-09-2017

ಧಾರವಾಡ: ರೈತರ ಬೆಳೆ ವಿಮೆ ಪರಿಹಾರ ನೀಡುವಂತೆ ಆಗ್ರಹಿಸಿ, ರೈತರು ಪ್ರತಿಭಟನೆ ನಡೆಸಿದ್ದಾರೆ. ಧಾರವಾಡ ತಾಲ್ಲೂಕಿನ ಮುಗದ ಗ್ರಾಮದ, ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್ (ಕೆವಿಜಿ) ಮುಂದೆ ಪ್ರತಿಭಟನೆ ನಡೆಸಿದ ರೈತರು, ಈ ವೇಳೆ ಪ್ರತಿಭಟನೆಗೆ ಸೂಕ್ತ ರೀತಿಯಲ್ಲಿ ಪ್ರತಿಕ್ರಿಯಿಸದ ಬ್ಯಾಂಕ್ ಸಿಬ್ಬಂದಿ ವಿರುದ್ಧ ಕೆರಳಿ, ಸಿಬ್ಬಂದಿಯನ್ನು ಹೊರ ಹಾಕಿ, ಬ್ಯಾಂಕ್ ಗೆ ಬೀಗ ಜಡಿದು ಪ್ರತಿಭಟಿಸಿದ್ದಾರೆ. ಕೂಡಲೆ ಬೆಳೆ ವಿಮೆ ಪರಿಹಾರ ಹಣವನ್ನು ರೈತರಿಗೆ ನೀಡುವಂತೆ ಒತ್ತಾಯಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ