ಕುಸಿದು ಬಿದ್ದ ವಿದ್ಯಾರ್ಥಿನಿ ದುರ್ಮರಣ !

Kannada News

11-09-2017 245

ಬೆಂಗಳೂರು: ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಳಿ, ವಸತಿ ನಿಲಯದಲ್ಲಿ ಕುಸಿದು ಬಿದ್ದು ಡಿಪ್ಲೊಮಾ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಎಲೆಕ್ಟ್ರಾನಿಕ್ ಸಿಟಿಯ ಸರಿತಾ (17)ಎಂದು ಗುರುತಿಸಲಾಗಿದೆ. ಮೃತ ಸರಿತಾ ಬಿಜಿಎಸ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿಕೊಂಡು ಬಿಜಿಎಸ್ ವಿದ್ಯಾರ್ಥಿನಿಯರ ವಸತಿನಿಲಯಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ವಸತಿ ನಿಲಯದ ಬಳಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಮೃತ ಸರಿತಾಳ ಮೃತದೇಹವನ್ನು ಚಿಕ್ಕಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ