ಜಗಳಕ್ಕೆ ನೊಂದ ಪತಿ ಆತ್ಮಹತ್ಯೆ !

Kannada News

11-09-2017

ಬೆಂಗಳೂರು: ಮಹದೇವಪುರದ ಬಿ.ನಾರಾಯಣಪುರದಲ್ಲಿ ಭಾನುವಾರ ರಾತ್ರಿ ಪತ್ನಿಯೊಂದಿಗೆ ಜಗಳ ಮಾಡಿಕೊಂಡ ನೋವಿನಲ್ಲಿ ಪತಿ ನೇಣಿಗೆ ಶರಣಾಗಿರುವ ದುರ್ಘಟನೆ ನಡೆದಿದೆ.

ಆಂಜನೇಯ ದೇವಸ್ಥಾನದ ಬಳಿ ವಾಸಿಸುತ್ತಿದ್ದ ವಿನೋದ್ ಕುಮಾರ್ (31)  ಎಂದು ಆತ್ಮಹತ್ಯೆ ಮಾಡಿಕೊಂಡವರನ್ನು ಗುರುತಿಸಲಾಗಿದೆ. ಖಾಸಗಿ ಕಂಪನಿಯೊಂದರಲ್ಲಿ ಸ್ವಚ್ಛತಾ ಕೆಲಸಕ್ಕೆ ಹೋಗುತ್ತಿದ್ದ ವಿನೋದ್ ರಾತ್ರಿ ಪತ್ನಿ ಹೇಮಲತಾ (28) ಅವರೊಂದಿಗೆ ಜಗಳ ಮಾಡಿಕೊಂಡಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿದಾಗ ಮನೆಯಿಂದ ಹೊರಗೆ ಹೋದ ಹೇಮಲತಾ ತನ್ನ ತಾಯಿಯನ್ನು ಕರೆದುಕೊಂಡು ಬರುವಷ್ಟರಲ್ಲಿ ವಿನೋದ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿರುವ ಮಹದೇವಪುರ ಪೊಲೀಸ್ ಇನ್ಸ್ ಪೆಕ್ಟರ್ ರಾಮಚಂದ್ರ ಅವರು ಮುಂದಿನ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ