ಗ್ರಾಮಕ್ಕೆ ನುಗ್ಗಿದ ಕಾಡಾನೆಗಳು !

Kannada News

12-09-2017

ಕೋಲಾರ: ಕೋಲಾರ ಜಿಲ್ಲೆ ಗಡಿ ಪ್ರದೇಶದಲ್ಲಿ ನಾಲ್ಕು ಕಾಡಾನೆಗಳು ಪ್ರತ್ಯಕ್ಷವಾಗಿವೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕು ಯರಗೋಳ ಗ್ರಾಮದ ಬಳಿ ಕಾಡಾನೆಗಳು ಕಾಣಿಸಿಕೊಂಡಿದ್ದು, ಇದರಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಇನ್ನು ಗ್ರಾಮಸ್ಥರ ನೆರವಿನೊಂದಿಗೆ ಪಟಾಕಿ ಸಿಡಿಸಿ ಆನೆಗಳನ್ನು ಕಾಡಿಗಟ್ಟುವ ಪ್ರಯತ್ನ ನಡೆಸುತ್ತಿದ್ದಾರೆ, ಅರಣ್ಯ ಇಲಾಖೆ ಸಿಬ್ಬಂದಿ. ಡೈರಿ ಮುಮ್ನೋಜಿ ರಾವ್ ಎಂಬುವವರ ಬಾಳೆ ತೋಟದಲ್ಲಿ ಕಾಡಾನೆಗಳು ಬೀಡುಬಿಟ್ಟಿವೆ. ಕಾಡಾನೆಗಳ ದಾಳಿಯಿಂದ ಬಾಳೆ ತೋಟ ನಷ್ಟವಾಗಿದ್ದು, ತಮಿಳುನಾಡಿನ ಕೃಷ್ಣಗಿರಿ ಅರಣ್ಯ ಪ್ರದೇಶದಿಂದ ಕೋಲಾರ ಗಡಿಗೆ ಬಂದಿವೆ ಎಂದು ಹೇಳಲಾಗುತ್ತಿದೆ. ಒಟ್ಟಾರೆ ಕಾಡಾನೆಗಳು ಗ್ರಾಮದಲ್ಲೇ ಬೀಡುಬಿಟ್ಟಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ