ಹಂತಕರ ಬಂಧನಕ್ಕೆ ಒತ್ತಾಯ !

12-09-2017 228
ಮೈಸೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಹಾಗೂ ಹಂತಕರ ಶೀಘ್ರ ಬಂಧನಕ್ಕೆ ಒತ್ತಾಯಿಸಿ ರಾಜ್ಯದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ, ಶಾಸಕ ಎಂ.ಕೆ ಸೋಮಶೇಖರ್, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಪ್ರಗತಿಪರ ಚಿಂತಕರು ಸೇರಿದಂತೆ ಸಾವಿರಾರು ಮಂದಿ ಭಾಗಿಯಾಗಿದ್ದರು.
ಗೌರಿ ಲಂಕೇಶ್ ಹತ್ಯೆ ಖಂಡಿಸಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು. ಗೌರಿ ಲಂಕೇಶ್ ರನ್ನು ಹತ್ಯೆ ಮಾಡಿರುವ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಒತ್ತಾಯಿಸಿದರು. ಮೈಸೂರಿನ ರಾಮಸ್ವಾಮಿ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ, ಚಾಮರಾಜ ಜೋಡಿ ರಸ್ತೆ, ಸಂಸ್ಕೃತ ಪಾಠಶಾಲೆ ವೃತ್ತ, ಸಯ್ಯಾಜಿರಾವ್ ರಸ್ತೆ, ದೇವರಾಜ ಅರಸು ರಸ್ತೆ ಮಾರ್ಗವಾಗಿ ಸಾಗಿ, ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಅಂತ್ಯಗೊಂಡಿತು. ರಾಮಸ್ವಾಮಿ ವೃತ್ತ ಸೇರಿದಂತೆ, ಪ್ರತಿಭಟನಾ ಮೆರವಣಿಗೆ ಸಾಗಿದ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತ, ವಾಹನ ಸವಾರರು ಪರದಾಡಬೇಕಾಯಿತು.
ಒಂದು ಕಮೆಂಟನ್ನು ಹಾಕಿ