ಕಾರು ಹರಿದು ಮಹಿಳೆ ಸಾವು

Kannada News

12-09-2017

ಬೆಂಗಳೂರು: ಪೀಣ್ಯದ ಎಸ್‍.ಆರ್.ಎಸ್‍ ನ ಬಳಿ ಕಳೆದ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗಲು ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ವೇಗವಾಗಿ ಬಂದ ಕಾರು ಹರಿದು ಮೃತಪಟ್ಟಿದ್ದಾರೆ. ಕೂಲಿ ಕೆಲಸ ಮಾಡುತ್ತಿದ್ದ ಪೀಣ್ಯ ಮೊದಲನೇ ಹಂತದ ರತ್ನಮ್ಮ (55) ಅವರು, ರಾತ್ರಿ 8.30ರ ವೇಳೆ ಪೀಣ್ಯದ ಎಸ್‍.ಆರ್.ಎಸ್‍ ಜಂಕ್ಷನ್ ಬಳಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಎಸ್ಟೀಮ್ ಕಾರು ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ನಂತರ ಕಾರಿನೊಂದಿಗೆ ಚಾಲಕ ಪರಾರಿಯಾಗಿದ್ದು, ಪೀಣ್ಯ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ