ಚಾಲಕನ ನಿದ್ದೆ ಮಂಪರು: ಮೂವರು ಬಲಿ !

Kannada News

12-09-2017

ಬೆಂಗಳೂರು: ನಿದ್ದೆ ಮಂಪರಿನಲ್ಲಿ ಲಾರಿ ಚಲಾಯಿಸಿಕೊಂಡು ವೇಗವಾಗಿ ಬಂದ ಚಾಲಕ ಆಟೋಗೆ ಡಿಕ್ಕಿ ಹೊಡೆದು ದೇವರ ದರ್ಶನಕ್ಕೆ ಹೋಗುತ್ತಿದ್ದ ಮೂವರು ಮೃತಪಟ್ಟು ಒಬ್ಬರು ಗಾಯಗೊಂಡಿರುವ ದುರ್ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಹೊರವಲಯದ ಮಾಡಿಕೆರೆ ಕ್ರಾಸ್ ಬಳಿ ನಡೆದಿದೆ.

ಮೃತಪಟ್ಟವರನ್ನು ಕುರಟಹಳ್ಳಿಯ ಮುರುಳಿ(45) ಅಶ್ವತ್ಥಪ್ಪ(55)ಹಾಗೂ ರಾಮಪುರದ ಚಲಪತಿ(35)ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ನಂಜಂಡಪ್ಪ(50)ಅವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿಂತಾಮಣಿ ತಾಲೂಕಿನ ಕುರುಟಹಳ್ಳಿಯಿಂದ ಮುಂಜಾನೆ 5ರ ವೇಳೆ ನಾಲ್ವರು ಆಂಧ್ರದ ಬಾಯಿಕೊಂಡ ಗಂಗಮ್ಮ ದೇವಸ್ಥಾನಕ್ಕೆ ಆಟೋದಲ್ಲಿ ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಮಾಡಿಕೆರೆ ಕ್ರಾಸ್ ಬಳಿ ಡಿಕ್ಕಿ ಹೊಡೆದ ಲಾರಿ ನಂತರ ರಸ್ತೆ ಬದಿಯ ಸಿಮೆಂಟ್ ತಡೆಗೋಡೆಗಳಿಗೆ ಡಿಕ್ಕಿ ಹೊಡೆದು ಮುಂದೆ ಹೋಗಿ ನಿಂತಿದೆ. ಲಾರಿ ಚಾಲಕ ನಿದ್ದೆಗೆ ಜಾರಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ