ಹೊಂಡಕ್ಕೆ ಬಿದ್ದು ಇಬ್ಬರು ದುರ್ಮರಣ !

Kannada News

13-09-2017

ಮಂಡ್ಯ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆಯು ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಆತಗೂರಿನಲ್ಲಿ ನಿನ್ನೆ ಸಂಜೆ ಈ ದುರ್ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗ್ರಾಮದ ಚಂದನ್(18), ಕಿರಣ್(13) ಮೃತ ದುದೈರ್ವಿಗಳು. ಕೈ‌ ಕಾಲು ತೊಳೆಯಲು ಹೋದ ವೇಳೆ ಕಿರಣ್ ಹೊಂಡದೊಳಗೆ ಬಿದ್ದಿದ್ದಾನೆ. ಆತನನ್ನು ಕಾಪಾಡಲು ಹೋಗಿ ಕಾಲು ಜಾರಿ ಬಿದ್ದ ಚಂದನ್ ಕೂಡ ಹೊಂಡದೊಳಗೆ ಮುಳುಗಿ, ಇಬ್ಬರು ಮೃತಪಟ್ಟಿದ್ದಾರೆ. ಇನ್ನು ಯುವಕರನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ. ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ