ಬ್ಲಾಕ್ ಪಲ್ಸರ್: ಮಾಂಗಲ್ಯ ಸರ ಕಳ್ಳತನ !

Kannada News

13-09-2017 293

ಹುಬ್ಬಳ್ಳಿ: ಹಾಡು ಹಗಲೇ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಮಾಂಗಲ್ಯ ಸರ ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಹಳೇ ಹುಬ್ಬಳ್ಳಿಯ ಗಣೇಶ ನಗರದಲ್ಲಿ ಘಟನೆ ನಡೆದಿದೆ. ಪೂರ್ಣಿಮಾ ನಾಗರಾಜ್ ಎಂಬ ಮಹಿಳೆಯ ಕತ್ತಿನಲ್ಲಿದ್ದ ಮಾಂಗಲ್ಯ ಸರ ಎಗರಿಸಿದ್ದಾರೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ, ಬ್ಲಾಕ್ ಪಲ್ಸರ್ ಬೈಕ್ ನಲ್ಲಿ ಬಂದ ಖದೀಮರು, ಚಿನ್ನದ ಸರ ಕದ್ದೊಯ್ದಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಅಪರಾಧ ವಿಭಾಗದ ಡಿಸಿಪಿ ನೇಮಗೌಡ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ