ಪುರಸಭೆ ನೌಕರರ ಧರಣಿ ಸತ್ಯಾಗ್ರಹ !

Kannada News

13-09-2017

ಬೆಂಗಳೂರು: ಸೇವೆ ಕಾಯಂ ಮಾಡುವುದು ಸೇರಿದಂತೆ, ತಮ್ಮ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೇಲ್ದರ್ಜೆಗೇರಿರುವ ಪಟ್ಟಣ ಪಂಚಾಯತ್ ಮತ್ತು ಪುರಸಭೆ ನೌಕರರು ಬೆಂಗಳೂರಿನಲ್ಲಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ, ಮೇಲ್ದರ್ಜೆಗೇರಿರುವ ಪಟ್ಟಣ ಪಂಚಾಯತ್, ಪುರಸಭೆ ನೌಕರರ ಸಂಘದ ನೂರಾರು ಮಂದಿ ಸದಸ್ಯರು ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಘೋಷಣೆ ಕೂಗಿದರು.                       

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾರುತಿ ಮಾನ್ಪಡೆ ಮಾತನಾಡಿ, ಪಟ್ಟಣ ಪಂಚಾಯತ್ ಹಾಗೂ ಪುರಸಭೆ ನೌಕರರ ಸೇವೆ ಕಾಯಂಗೊಳಿಸಬೇಕು, ಸರ್ಕಾರದಿಂದ ಅವರಿಗೆ ಸಿಗುವ ಎಲ್ಲಾ ಸೌಲಭ್ಯ ಪೂರ್ವಾನ್ವಯವಾಗುವಂತೆ ಆದೇಶ ಹೊರಡಿಸಬೇಕು. ನೌಕರರ ಸೇವೆ ಕಾಯಂ ಆಗುವತನಕ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ