ಕ್ಯಾಬ್ ಡಿಕ್ಕಿ: ವಿದ್ಯಾರ್ಥಿ ಸಾವು !



13-09-2017 156 0

ಬೆಂಗಳೂರು: ಜಾಲಹಳ್ಳಿಯ ಕೆರೆಗುಡ್ಡದಹಳ್ಳಿ ಮುಖ್ಯ ರಸ್ತೆಯಲ್ಲಿ ಮಂಗಳವಾರ ರಾತ್ರಿ ವೇಗವಾಗಿ ಬಂದ ಮ್ಯಾಕ್ಸಿ ಕ್ಯಾಬ್ ಡಿಕ್ಕಿ ಹೊಡೆದು ಸ್ಕೂಟರ್ನಲ್ಲಿ ಹೋಗುತ್ತಿದ್ದ ಪಿಯುಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟರೆ, ಮತ್ತೊಬ್ಬ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಮೃತಪಟ್ಟ ವಿದ್ಯಾರ್ಥಿಯನ್ನು ತಂಬೇನಹಳ್ಳಿಯ ಕೇಶವಮೂರ್ತಿ (17) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಹರ್ಷನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. 

ಆಚಾರ್ಯ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ಕೇಶವಮೂರ್ತಿ, ರಾತ್ರಿ 7.50ರ ವೇಳೆ ಜೆರಾಕ್ಸ್ ಮಾಡಿಸಿಕೊಂಡು ಬರಲು ಸ್ನೇಹಿತ ಹರ್ಷನನ್ನು ಹಿಂದೆ ಕೂರಿಸಿಕೊಂಡು ಡಿಯೋ ಸ್ಕೂಟರ್ನಲ್ಲಿ ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಕೆರೆಗುಡ್ಡದಹಳ್ಳಿ ಮುಖ್ಯರಸ್ತೆಯಲ್ಲಿ ವೇಗವಾಗಿ ಬಂದ ಮ್ಯಾಕ್ಸಿ ಕ್ಯಾಬ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಪ್ರಕರಣ ದಾಖಲಿಸಿರುವ ಜಾಲಹಳ್ಳಿ ಸಂಚಾರ ಪೊಲೀಸರು ಮ್ಯಾಕ್ಸಿ ಕ್ಯಾಬ್ ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Links :





ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ