ಬಸ್-ಲಾರಿ ಅಪಘಾತ 3 ಸಾವು !

Kannada News

14-09-2017

ಚಿತ್ರದುರ್ಗ: ಲಾರಿ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿ, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆಯು ಚಿತ್ರದುರ್ಗದಲ್ಲಿ ನಡೆದಿದೆ. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 4 ರ ಬಳಿಯ, ಹಿರಿಯೂರು ತಾಲ್ಲೂಕಿನ ಐಮಂಗಲ ಗ್ರಾಮದ ಬಳಿ ಅಪಘಾತವಾಗಿದೆ. ಘಟನೆಯಲ್ಲಿ ಖಾಸಗಿ ಬಸ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಲ್ಲದೇ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತವಾದ ಖಾಸಗಿ ಬಸ್ ಚಿತ್ರದುರ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದು, ಬೆಳಗ್ಗೆ 6 ಗಂಟೆ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ