ಕಾಂಗ್ರೆಸ್ ನ ಬೂತ್ ಮಟ್ಟದ ಸಮಾವೇಶ !

Kannada News

14-09-2017

ಬೆಳಗಾವಿ: ಬೆಳಗಾವಿಯಲ್ಲಿಂದು ಕಾಂಗ್ರೆಸ್ ನ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಬೆಳಗಾವಿ ತಾಲ್ಲೂಕಿನ ಸುಳೇಭಾವಿಯಲ್ಲಿ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್, ಸಚಿವರಾದ ಡಿ.ಕೆ.ಶಿವಕುಮಾರ್, ರಮೇಶ ಜಾರಕಹೊಳಿ, ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ, ಮತ್ತಿತರರು, ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಬೆಳಗಾವಿ‌ ಗ್ರಾಮೀಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದ ಸಮಾವೇಶವಾಗಿದೆ. ಸಮಾವೇಶದಲ್ಲಿ 10 ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗಬಹುದೆಂದು ಹೇಳಲಾಗುತ್ತಿದೆ.  2018ರ ವಿಧಾನಸಭಾ ಚುನಾವಣೆಗೆ ಪೂರ್ವ ಸಿದ್ಧತೆ ಹಿನ್ನೆಲೆಯಲ್ಲಿ ನಡೆಯುತ್ತಿರುವ ಸಮಾವೇಶ ಎನ್ನಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ