ಅಕ್ರಮ ಮದ್ಯ ಸಾಗಾಟ: ಇಬ್ಬರ ಬಂಧನ !

Kannada News

14-09-2017

ಮೈಸೂರು: ಅಕ್ರಮವಾಗಿ ಮದ್ಯ ಸಾಗಣೆ ಮಾಡುತ್ತಿದ್ದ, ಇಬ್ಬರು ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ  ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ ನಡೆಸಿ, ಸೂರೇಗೌಡ ಹಾಗೂ ಸುಜೇಂದ್ರ ಎಂಬುವರನ್ನು ಬಂಧಿಸಿದ್ದಾರೆ.  ಜಿಲ್ಲೆಯ ಹುಣಸೂರು ತಾಲ್ಲೂಕಿನ ಸಿಂಡೇನಹಳ್ಳಿ ಬಳಿ, ಬೈಕ್ ನಲ್ಲಿ ಮದ್ಯದ ಟೆಟ್ರಾ ಪ್ಯಾಕ್ ಗಳನ್ನು ಅಕ್ರಮವಾಗಿ ಸಾಗಿಸುವಾಗ ದಾಳಿ ನಡೆಸಿ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ. ಒಟ್ಟು 288 ಟೆಟ್ರಾ ಪ್ಯಾಕ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ