ವಿವಿಧ ವಲಯ ನೌಕರರ ಪ್ರತಿಭಟನೆ !

Kannada News

14-09-2017

ಬೆಂಗಳೂರು: ಸಮಾನವೇತನ, ಕೆಲಸ ಖಾಯಂ, ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸಾರಿಗೆ ನೌಕರರು, ಅಂಗನವಾಡಿ, ಬಿಸಿಯೂಟ, ಪಂಚಾಯ್ತಿ, ಕಟ್ಟಡ ಕಾರ್ಮಿಕರು, ದಿನಗೂಲಿ ನೌಕರರು ಸೇರಿದಂತೆ ವಿವಿಧ ವಲಯದ ಸಾವಿರಾರು ಜನರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೂ, ಸಿಐಟಿಯು ನೇತೃತ್ವದಲ್ಲಿ ಬೃಹತ್ ರ‍್ಯಾಲಿ ನಡೆಸಿ ಪ್ರತಿಭಟಿಸಿದ್ದಾರೆ. ಅಲ್ಲದೇ ಪ್ರತಿಭಟನೆಗೆ  ನೂರಾರು ಸಂಖ್ಯೆಯಲ್ಲಿ ಆಟೋ ಚಾಲಕರು ಸಾಥ್ ನೀಡಿರುವುದು ವಿಶೇಷವಾಗಿತ್ತು. ರಾಜ್ಯದ ವಿವಿಧೆಡೆಯಿಂದ ಬಂದಿರೋ ಕಾರ್ಮಿಕರು, ಸಿಟಿ ರೈಲು ನಿಲ್ದಾಣದಲ್ಲಿ ಘೋಷಣೆಗಳನ್ನು ಕೂಗಿ, ರಾಜ್ಯ ಸರ್ಕಾರ ಕೂಡಲೆ ಈ ಕುರಿತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ