ಬೈಕ್ ನಲ್ಲಿ ಬಂದು: ಮಾಂಗಲ್ಯ ಎಗರಿಸಿದರು !

Kannada News

14-09-2017

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್‍ನ ಮೈಕೋ ಬಡಾವಣೆಯಲ್ಲಿ, ಬೆಳ್ಳಂಬೆಳಿಗ್ಗೆ ವಾಯು ವಿಹಾರಕ್ಕೆ ಹೋಗಿ ಮನೆಗೆ ನಡೆದುಕೊಂಡು ಬರುತ್ತಿದ್ದ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಪಲ್ಸರ್ ಬೈಕ್‍ ನಲ್ಲಿ ಬಂದ ದುಷ್ಕರ್ಮಿಗಳು ಕಸಿದು ಪರಾರಿಯಾಗಿದ್ದಾರೆ. ಮಹಾಲಕ್ಷ್ಮಿ ಲೇಔಟ್ ನ ಮೈಕೋ ಬಡಾವಣೆಯ 2ನೇ ಕ್ರಾಸ್ ನ, ಲಕ್ಷ್ಮಿ (67) ಅವರು ಹತ್ತಿರದ ಪಾರ್ಕ್ ಗೆ  ವಾಯುವಿಹಾರಕ್ಕೆ ಹೋಗಿ ಮನೆಗೆ 7ರ ವೇಳೆ ನಡೆದುಕೊಂಡು ಬರುತ್ತಿದ್ದಾಗ, ಕಪ್ಪು ಬಣ್ಣದ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಕತ್ತಿನಲ್ಲಿದ್ದ 55 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಸಿದು ಪರಾರಿಯಾಗಿದ್ದಾರೆ.

ಪ್ರಕರಣ ದಾಖಲಿಸಿರುವ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಹತ್ತಿರದ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸಿ ದುಷ್ಕರ್ಮಿಗಳ ಪತ್ತೆಗಾಗಿ ತೀವ್ರ ಶೋಧ ನಡೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ