ಮೋರಿಯಲ್ಲಿ ಶವ ಪತ್ತೆ !

Kannada News

14-09-2017

ಬೆಂಗಳೂರು: ನಗರದ ಹೊರವಲಯದ ಮಾದನಾಯಕನಹಳ್ಳಿ ಬಳಿಯ ಟಿಸಿಐ ಬಸ್ ನಿಲ್ದಾಣ ಬಳಿ, ರಸ್ತೆ ಬದಿಯ ಮೋರಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸುಮಾರು 45 ವರ್ಷ ವಯಸ್ಸಿನ ಆಸುಪಾಸಿನ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ಬಿಸಾಡಿ ಹೋಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಮೋರಿಯಲ್ಲಿ ಬಿದ್ದಿರುವ ಅಪರಿಚಿತ ಶವ ಸಂಪೂರ್ಣ ಕೊಳೆತಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ದುರ್ವಾಸನೆ ಬೀರಿದ್ದು ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.


ಸಂಬಂಧಿತ ಟ್ಯಾಗ್ಗಳು

ಬೆಂಗಳೂರು ಮೋರಿಯಲ್ಲಿ ಶವ ಪತ್ತೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ