ಭಾರೀ ಮಳೆ: ಮನೆಯ 4 ಗೋಡೆ ಕುಸಿತ !

Kannada News

15-09-2017

ಚಿತ್ರದುರ್ಗ: ನಿನ್ನೆ ರಾತ್ರಿ ಸುರಿದ ಮಳೆಗೆ ಮನೆಯ 4 ಗೋಡೆಗಳು ಕುಸಿದಿರುವ ಘಟನೆಯು, ಚಿತ್ರದುರ್ಗದಲ್ಲಿ ನಡೆದಿದೆ. ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹೂವಿನಹೊಳೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಳೆದ ನಾಲ್ಕು ವರ್ಷದಲ್ಲಿ ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಿಲ್ಲೆಯ ಹಿರಿಯೂರು, ಚೆಳ್ಳಕೆರೆ ತಾಲ್ಲೂಕಿನಾದ್ಯಂತ ರಾತ್ರಿ ಭಾರಿ ಮಳೆ ಸುರಿದಿದೆ. ಒಂದೆಡೆ ಮಳೆಯಿಂದ ಅನಾಹುತಗಳು ಸೃಷ್ಟಿಯಾಗುತ್ತಿದ್ದರೆ, ಮಳೆ ಕೃಷಿಗೆ ಸಹಾಯವಾಗಲಿದೆ ಎಂದು ರೈತರ ಮೊಗದಲ್ಲಿ ಸಂತಸ ಹೆಚ್ಚಿದೆ.                       ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ