ಭಾರೀ ಮಳೆ: ಸೇತುವೆ ಮುಳುಗಡೆ !

Kannada News

15-09-2017

ಬಳ್ಳಾರಿ: ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ, ಹಲವೆಡೆ ಹಲವು ಅವಾಂತರಗಳು ಸೃಷ್ಟಿಯಾಗಿದ್ದು, ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿನ ವೇದಾವತಿ ನದಿ ತುಂಬಿ ಹರಿಯುತ್ತಿದೆ. ಇನ್ನು ಜಿಲ್ಲೆಯಾದ್ಯಂತ ಹೆಚ್ಚಿನ ಮಳೆಯಾಗಿದ್ದು, ಅಲ್ಲಲ್ಲಿ ಮಳೆಯು ಅವಾಂತರ ಸೃಷ್ಟಿಸಿದೆ. ಇನ್ನು ಜಿಲ್ಲೆಯ ರಾರಾವಿ ಸೇತುವೆ ಮುಳುಗಡೆಯಾಗಿದ್ದು, ಸಂಚಾರ ಸ್ಥಗಿತಗೊಂಡಿದೆ. ಈ ಮಾರ್ಗದಲ್ಲಿ ಪ್ರತಿದಿನ ಹೆಚ್ಚಿನ ವಾಹನಗಳು ಸಂಚಾರ ಮಾಡುತ್ತಿದ್ದು, ಸಂಚಾರಕ್ಕೆ ಅಡ್ಡಿಯಾಗಿ, ಪ್ರಯಾಣಿಕರಿಗೆ ತೊಂದರೆಯಾಗಿದೆ.   ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ