ಮೇಯರ್ ಚುನಾವಣೆ: ಪರಮೇಶ್ವರ್ ನೇತೃತ್ವದ ಸಭೆ !

Kannada News

15-09-2017

ಬೆಂಗಳೂರು: ಬಿಬಿಎಂಪಿ ಮೇಯರ್ ಹಾಗು ಉಪಮೇಯರ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನೇತೃತ್ವದಲ್ಲಿ, ಕೆಪಿಸಿಸಿ ಕಚೇರಿಯಲ್ಲಿ, ಬೆಂಗಳೂರು ನಗರದ ಶಾಸಕರು ಹಾಗು ಪರಿಷತ್ ಸದಸ್ಯರ ಜೊತೆ ಸಭೆ ನಡೆಸಿದ್ದಾರೆ. ಸಭೆಗೂ ಮುನ್ನ ಮಾತನಾಡಿದ  ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು, ಬಿಬಿಎಂಪಿ ಚುನಾವಣೆಯಲ್ಲಿ ಬೆಂಗಳೂರು ನಗರದ ಕಾಂಗ್ರೆಸ್ ಜನಪ್ರತಿನಿಧಿಗಳ ಜೊತೆ ಸಭೆ ಮಾಡುತ್ತಿದ್ದೇನೆ, ಜೆಡಿಎಸ್ ಜೊತೆ ಮೈತ್ರಿ ಮುಂದುವರೆಸುವ ಬಗ್ಗೆ ಹಾಗು ಮೇಯರ್ ಆಯ್ಕೆ ಬಗ್ಗೆ ಚರ್ಚೆ ಮಾಡುತ್ತೇವೆ, ದೇವೇಗೌಡರನ್ನು ಈಗಾಗಲೇ ರಾಮಲಿಂಗಾರೆಡ್ಡಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದರು. ಅವಶ್ಯಕತೆ ಬಿದ್ರೆ ನಾನು ಕೂಡ ದೇವೇಗೌಡರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇನೆ ಎಂದರು.

ನಾಳೆಯಿಂದ ಕೆ.ಸಿ.ವೇಣುಗೋಪಾಲ್ ನೇತ್ರತ್ವದಲ್ಲಿ ಪಕ್ಷದ ಸಂಘಟನೆ ಬಗ್ಗೆ ಸರಣಿ ಸಭೆ ನಡೆಯುತ್ತಿದೆ. ಇವಿಎಂ ಮಿಷಿನ್ ಬಗ್ಗೆ ನಮಗೂ ಅನುಮಾನ ಇದೆ, ಉತ್ತರ ಪ್ರದೇಶ ಚುನಾವಣಾ ಬಳಿಕ ದೇಶದಲ್ಲಿ ಎಲ್ಲರಿಗೂ ಅನುಮಾನ ಮೂಡುತ್ತಿದೆ, ನಮಗೂ ಕೂಡ ಈ ಅನುಮಾನ ಮೂಡಿದೆ ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ