ರಸ್ತೆ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ !

Kannada News

16-09-2017

ಬೆಳಗಾವಿ: ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ, ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿ ತಾಲ್ಲೂಕಿನ ಸಾಂಭ್ರಾ ಗ್ರಾಮದಲ್ಲಿ ರಸ್ತೆ ತಡೆದ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಒಂದು ಗಂಟೆಗಳ ಕಾಲ ರಸ್ತೆ ತಡೆಯಿಂದ ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ತೀವ್ರ ಪರದಾಡಬೇಕಾಯಿತು. ಇನ್ನು ಸ್ಥಳಕ್ಕಾಗಮಿಸಿದ ಮಾರಿಹಾಳ ಪೋಲಿಸರು ವಿದ್ಯಾರ್ಥಿಗಳ ಮನವೂಲಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಸಮರ್ಪಕ ಬಸ್ ವ್ಯವಸ್ಥೆಯಿಲ್ಲದೆ ಹಲವು ತಿಂಗಳಿಂದ ವಿದ್ಯಾರ್ಥಿಗಳು ಪರದಾಡುತ್ತಿದ್ದು, ಕೂಡಲೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ