ಫೇಲಾದ ವಿದ್ಯಾರ್ಥಿ ಆತ್ಮಹತ್ಯೆ !

Kannada News

16-09-2017

ಮೈಸೂರು: ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿದ್ದರಿಂದ, ಮನ ನೊಂದ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾನೆ. ಸಾಗರ್ (23) ಮೃತ ದುರ್ದೈವಿ. ಘಟನೆಯು, ಮೈಸೂರು ತಾಲ್ಲೂಕು ಲಲಿತಾದ್ರಿಪುರ ಗ್ರಾಮದಲ್ಲಿ ನಡೆದಿದೆ. ಮೈಸೂರಿನ ಯುವರಾಜ ಕಾಲೇಜಿನ ವಿಧ್ಯಾರ್ಥಿಯಾಗಿದ್ದ ಸಾಗರ್, ಬಿ.ಎಸ್ಸಿ ಪರೀಕ್ಷೆಯ ಎರಡು ವಿಷಯಗಳಲ್ಲಿ ಅನುತ್ತೀರ್ಣನಾಗಿದ್ದ. ಅಲ್ಲದೇ ಸಪ್ಲಿಮೆಂಟರಿ ಪರೀಕ್ಷೆಯಲ್ಲೂ ಅನುತ್ತೀರ್ಣನಾಗಿದ್ದು ಇದರಿಂದ ನೊಂದ, ಸಾಗರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಸಾಗರ್ ನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಪ್ರಕರಣ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ