ಕರ್ನಾಟಕ ಮುಕ್ತ ವಿವಿ: ವಿದ್ಯಾರ್ಥಿಗಳ ಪ್ರತಿಭಟನೆ !

Kannada News

16-09-2017 395

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿ.ವಿ ಗೆ ಯು.ಜಿ.ಸಿ ಮಾನ್ಯತೆ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಕೆ.ಎಸ್.ಒ.ಯು ವಿದ್ಯಾರ್ಥಿಗಳು, ಈ ಹಿಂದಿನ ಕುಲಪತಿ ಹಾಗೂ ಯುಜಿಸಿ ವರ್ತನೆಯ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದರು. ಹಿಂದಿನ ಕುಲಪತಿಗಳಾದ ಪ್ರೊ. ಕೆ.ಎಸ್. ರಂಗಪ್ಪ ಹಾಗೂ ಪ್ರೊ. ಎಂ. ಜಿ. ಕೃಷ್ಣನ್ ವಿರುದ್ಧ ಘೋಷಣೆಗಳನ್ನು ಕೂಗಿದರು.

 ಮುಕ್ತ ವಿ.ವಿಯ ಮಾನ್ಯತೆ ರದ್ದಾಗಲು ಕರ್ತವ್ಯಲೋಪವೆಸಗಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು, ಕೆ.ಎಸ್.ಓ.ಯು ವಿದ್ಯಾರ್ಥಿಗಳ ಭವಿಷ್ಯ ಕಾಪಾಡಲು ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ