ಬಾಲಕಿ ಎಳೆದೊಯ್ದು ಅತ್ಯಾಚಾರ !

Kannada News

16-09-2017

ಬೆಂಗಳೂರು: ರಾಮನಗರದ ಯಾರಬ್ ನಗರದಲ್ಲಿ ಯುವಕನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿರುವ ಹೀನ ಕೃತ್ಯ ನಡೆದಿದೆ.

ಯಾರಬ್ ನಗರದ ಸದ್ದಾಂ ಹುಸೇನ್ (20) ಅತ್ಯಾಚಾರ ಎಸಗಿದ ಆರೋಪಿಯಾಗಿದ್ದಾನೆ. ಮೂರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆಂದು ಆರೋಪಿಸಲಾಗಿದೆ. ಶಾಲೆ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಬಾಲಕಿಯನ್ನು ಬಲವಂತವಾಗಿ ಇಟ್ಟಿಗೆ ಕಾರ್ಖಾನೆಗೆ ಕರೆದೊಯ್ದು, ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ವಿರುದ್ಧ ರಾಮನಗರ ಪೊಲೀಸರು ಅತ್ಯಾಚಾರ ಪ್ರಕರಣ ದಾಖಸಿಲಿಕೊಂಡಿದ್ದಾರೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ