ರೈಲಿಗೆ ತಲೆಕೊಟ್ಟ ಎಂಜಿನಿಯರ್ !

Kannada News

16-09-2017

ಮಂಡ್ಯ: ಡೆತ್‌ ನೋಟ್ ಬರೆದಿಟ್ಟು, ರೈಲಿಗೆ ತಲೆಕೊಟ್ಟ, ಎಂಜಿನಿಯರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು, ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಪಾಂಡವಪುರ ರೈಲ್ವೆ ನಿಲ್ದಾಣದ ನೆಲಮನೆ ಗೇಟ್ ಬಳಿ ಈ ದುರ್ಘಟನೆ ಸಂಭವಿಸಿದೆ. ಹಾರೋಹಳ್ಳಿ ಗ್ರಾಮದ ಎಚ್.ಪಿ.ರಾಜು(28) ಮೃತ ದುದೈರ್ವಿ. ಬೆಂಗಳೂರಿನ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದ ರಾಜು, ಇಂದು ಬೆಳಗಿನ ಜಾವ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತನ ಶವ ಪಾಂಡವಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆಸ್ಪತ್ರೆಗೆ ಸಂಸದ ಸಿ.ಎಸ್.ಪುಟ್ಟರಾಜು, ಶಾಸಕ ಪುಟ್ಟಣ್ಣಯ್ಯ ಭೇಟಿ ನೀಡಿದ್ದಾರೆ. ಮಂಡ್ಯ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ