4-5 ದಿನದಲ್ಲಿ: ದಾಖಲೆ ಬಿಡುಗಡೆ ಮಾಡುತ್ತೇನೆ..

Kannada News

18-09-2017

ಕಲಬುರಗಿ: ಮುಂದಿನ ನಾಲ್ಕೈದು ದಿನಗಳಲ್ಲಿ ಕಾಂಗ್ರೆಸ್ ಸಚಿವರು ಹಾಗೂ ಶಾಸಕರು ಮಾಡಿರುವ ಭ್ರಷ್ಟಾಚಾರ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಕಲಬುರಗಿಯಲ್ಲಿಂದು ಮಾತನಾಡಿದ ಅವರು, ಇದೆ 23 ರಂದು ಸಿಎಂ ವಿರುದ್ಧ ಚಾರ್ಜ್ ಸೀಟ್ ಸಲ್ಲಿಸುವುದಾಗಿ ತಿಳಿಸಿದರು.

ಇನ್ನು, ಪಕ್ಷದ ನಾಯಕರ, ಕಾರ್ಯಕರ್ತರ ಆಸೆಯಂತೆ ಉತ್ತರ ಕರ್ನಾಟಕದಲ್ಲಿ ಚುನಾವಣೆ ಸ್ಪಧಿಸಲು ನಿರ್ಧಾರ ಮಾಡಿದ್ದು, ಕೇಂದ್ರ ನಾಯಕರು ಅನುಮತಿ ನೀಡಿದ್ರೆ ಬಾಗಲಕೋಟೆ ಅಥವಾ ವಿಜಯಪುರ ಜಿಲ್ಲೆಯಿಂದ ಸ್ಪರ್ಥಿಸುತ್ತೇನೆ ಎಂದರು. ಚುನಾವಣೆ ದೃಷ್ಟಿಯಿಂದ ಸಿಎಂ ಸಿದ್ದರಾಮಯ್ಯ ಹಲವು ಯೋಜನೆ ಘೋಷಣೆ ಮಾಡುತ್ತಾ, ಜನರ ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

ಜನವರಿ ನಂತರ ಘೋಷಿಸಿದ ಯಾವುದೇ ಯೋಜನೆ ಕಾರ್ಯರೂಪಕ್ಕೆ ಬರಲ್ಲ, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ, ಕಾನೂನು ಸುವ್ಯವಸ್ಥೆ ಹಳ್ಳ ಹಿಡಿದಿದೆ, ಜನರಿಗೆ ರಕ್ಷಣೆ ಇಲ್ಲದಂತಾಗಿದೆ ವಾಗ್ದಾಳಿ ನಡೆಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ