ಭಾರತಿ ವಿಷ್ಣುವರ್ಧನ್ ಗರಂ!

Kannada News

18-09-2017

ಬೆಂಗಳೂರು: ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 67 ನೇ ಹುಟ್ಟುಹಬ್ಬ ಆಚರಣೆ ಅಂಗವಾಗಿ, ಬೆಂಗಳೂರಿನ ರಾಷ್ಟ್ರೀಯ ಡೈರಿ ಸಂಶೋಧನಾ ಸಂಸ್ಥೆಯಲ್ಲಿ ಗಿಡಗಳನ್ನು ನೆಡುವ  ಕಾರ್ಯಕ್ರಮ ನಡೆಸಲಾಯಿತು.  ವಿಷ್ಣುವರ್ಧನ್ ಹುಟ್ಟು ಹಬ್ಬ ಅಂಗವಾಗಿ ರಾಷ್ಟ್ರೀಯ ಡೈರಿ ಸಂಶೋಧನಾ ಸಂಸ್ಥೆ, ಗಾಲ್ಫ್ ವಿಲೇಜ್ ಹಾಗೂ ರೋಟರಿ ಸಂಯುಕ್ತವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾರತಿ ವಿಷ್ಣುವರ್ಧನ್, ಪುತ್ರಿ ಕೀರ್ತಿ ಹಾಗೂ ಅಳಿಯ ಅನಿರುಧ್ ಅವರೊಂದಿಗೆ ಗಿಡ ನೆಡುವ ಕಾರ್ಯಕ್ಕೆ ಚಾಲನೆ ನೀಡಿದರು. ರಾಷ್ಟ್ರೀಯ ಡೈರಿ ಸಂಶೋಧನಾ ಸಂಸ್ಥೆಯ ಆವರಣದಲ್ಲಿ  ಹೊಂಗೆ, ನೆರಳೆ, ಹಳಸು, ಮಾವು ಸಹಿತ ವಿವಿಧ ಜಾತಿಯ 400 ಕ್ಕೂ ಅಧಿಕ ಗಿಡಗಳನ್ನು ನೆಡಲಾಯಿತ್ತು. ಗಿಡ ನೆಡುವ ಕಾರ್ಯಕ್ರಮದ ನಂತರ ಮಾತನಾಡಿದ, ಭಾರತಿ ವಿಷ್ಣುವರ್ಧನ್ ಅವರು  ಗಿಡ ನೆಡುವ ಮೂಲಕ ವಿಷ್ಣುವರ್ಧನ್ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿಷ್ಣುವರ್ಧನ್ ಪರಿಸರ ಪ್ರೇಮಿಯಾಗಿದ್ದು, ಗಿಡ ನೆಡುವ ಕಾರ್ಯಕ್ರಮ ಅವರಿಗೆ ಖುಷಿ ಕೊಡುತ್ತದೆ ಎಂದರು.  ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಕಾರ್ಯ ಸದ್ಯಕ್ಕೆ ಸ್ಥಗಿತವಾಗಿದೆ. ನ್ಯಾಯಾಲಯ ತಡೆ ನೀಡಿರುವುದರಿಂದ ಸ್ಮಾರಕ ನಿರ್ಮಾಣ ಕಾರ್ಯ ಸ್ಥಗಿತಗೊಳಿಸಲಾಗಿದೆ. ನ್ಯಾಯಾಲಯದ ತಡೆಯಾಜ್ಞೆ ತೆರವುಗೊಂಡ ನಂತರ ಸ್ಮಾರಕ ನಿರ್ಮಾಣ ಕಾರ್ಯ ಮುಂದುವರಿಸಲಾಗುವುದು, ಯಾವುದೇ ಕಾರಣಕ್ಕು ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಮಾಡುವ ಕಾರ್ಯದಿಂದ ಹಿಂದೆ ಸರಿಯುವುದಿಲ್ಲ ಎಂದು ಭಾರತಿ ವಿಷ್ಣುವರ್ಧನ್ ಹೇಳಿದರು. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಕಾರ್ಯಕ್ಕೆ ಆರಂಭದಿಂದಲು ಒಂದಲ್ಲ ಒಂದೂ ರೀತಿಯಲ್ಲಿ ಅಡೆ ತಡೆ ಎದುರಾಗುತ್ತಿದೆ ಏಕೆ ಹೀಗಾಗುತ್ತದೆ ಎಂದು ಅರ್ಥವಾಗುತ್ತಿಲ್ಲ ಎಂದ ಭಾರತಿ ವಿಷ್ಣುವರ್ಧನ್, ಎಷ್ಟೇ ಅಡ ತಡೆ ಎದುರಾದರೂ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಕಾರ್ಯದಿಂದ ಹಿಂದೆ ಸರಿಯುವುದಿಲ್ಲ ಎಂದು ಆತ್ಮವಿಶ್ವಾಸದಿಂದ ಹೇಳಿದರು. ಗಾಲ್ಫ್ ವಿಲೇಜ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಬಿ.ಎಲ್.ನಾಗೇಂದ್ರ ಪ್ರಸಾದ ಹಾಜರಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ