ವ್ಹೀಲಿಂಗ್ ಮೋಜು: ಬೈಕ್ ಕಳ್ಳರು ಅರೆಸ್ಟ್ !

Kannada News

18-09-2017

ಬೆಂಗಳೂರು: ನಗರದ ವಿವಿಧೆಡೆ ಬೈಕ್‍ ಗಳನ್ನು ಕಳ್ಳತನ ಮಾಡುತ್ತಿದ್ದ, ಇಬ್ಬರನ್ನು ಬಂಧಿಸಿರುವ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿತರಿಂದ 11 ಲಕ್ಷ ರೂ. ಬೆಲೆ ಬಾಳುವ 21 ಬೈಕ್‍ ಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳಾದ ತೌಸಿಫ್ ಹಾಗೂ ಮಂಜುನಾಥ್ ಇವರುಗಳು ನಗರದ ವಿವಿಧೆಡೆ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಬಂಧಿತರಿಂದ ಸುಮಾರು 8 ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ.

ಇನ್ನೊಂದೆಡೆ ಕದ್ದ ಬೈಕ್‍ ಗಳಲ್ಲಿ ವ್ಹೀಲಿಂಗ್ ಮಾಡುತ್ತಿದ್ದ, ಇಬ್ಬರು ಆರೋಪಿಗಳನ್ನು ಮೈಕೋಲೇಔಟ್ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಾದ ಸಲ್ಮಾನ್ ಮತ್ತು ಸಯೈದ್ ಇವರಿಂದ ನಾಲ್ಕು ಲಕ್ಷ ರೂ. ಮೌಲ್ಯದ 8 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರು ನಗರದ ವಿವಿಧೆಡೆ ದ್ವಿಚಕ್ರ ವಾಹನಗಳನ್ನು ಕದ್ದು ಅದರಲ್ಲಿ ವ್ಹೀಲಿಂಗ್ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮೈಕೋಲೇಔಟ್ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ