20 ಕೆ.ಜಿ ಅಕ್ರಮ ಚಿನ್ನ ವಶ !

Kannada News

18-09-2017

ಬೆಂಗಳೂರು: ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಕಸ್ಟಮ್ಸ್ ಅಧಿಕಾರಿಗಳು ಕೋಟ್ಯಂತರ ರೂ. ಬೆಲೆ ಬಾಳುವ 20 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ದುಬೈನಿಂದ ಬೆಂಗಳೂರಿಗೆ ಪ್ರಯಾಣಿಕರ ಸೋಗಿನಲ್ಲಿ ಕಳೆದ ಸೆ. 15 ರಂದು ನಗರದ ದೇವನಹಳ್ಳಿ ಅಂತರರಾಷ್ಟ್ರೀಯಕ್ಕೆ ಬಂದಿಳಿದಿದ್ದ ಬಂಧಿತ ಆರೋಪಿಗಳು ಬ್ಯಾಗ್ ನಲ್ಲಿ ಚಿನ್ನವನ್ನು ಅಡಗಿಸಿಟ್ಟು ತಂದಿದ್ದರು. ಕಸ್ಟಮ್ ಅಧಿಕಾರಿಗಳು, ಬ್ಯಾಗ್ ನ ತಪಾಸಣೆ ಸಂದರ್ಭದಲ್ಲಿ ಚಿನ್ನವಿರುವುದನ್ನು ಪತ್ತೆ ಮಾಡಿ 20 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡಿರುವ ಚಿನ್ನದ ಬೆಲೆ 5 ರಿಂದ 6 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಬಂಧಿತ ಆರೋಪಿಗಳನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆಯನ್ನು ಮುಂದುವರೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ