ಸಿಎಂ ಕೋಲಾರದಲ್ಲಿ ಸ್ಪರ್ಥಿಸಲಿ..

Kannada News

19-09-2017

ಕೋಲಾರ: 2018 ರ ವಿಧಾನಸಭಾ ಚುನಾವಣೆ ಹಿನ್ನೆಲೆ, ಮಾಜಿ ಸಭಾಪತಿ ವಿ.ಆರ್ ಸುಧರ್ಶನ್ ಅವರು ಸೋನಿಯಾಗಾಂಧಿಯವರಿಗೆ ಪತ್ರ ಬೆರೆದಿದ್ದಾರೆ. 2018 ರ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯರನ್ನು ಕೋಲಾರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸುವಂತೆ ತಮ್ಮ ಪತ್ರದಲ್ಲಿ ಮನವಿಮಾಡಿದ್ದಾರೆ. ಬಯಲು ಸೀಮೆ ಜಿಲ್ಲೆಗಳಲ್ಲಿ ಪಕ್ಷದ ಬೆಳವಣಿಗೆ ಹಾಗೂ ಜಿಲ್ಲೆಗಳ ಅಭಿವೃದ್ಧಿ ದೃಷ್ಟಿಯಿಂದ ಪತ್ರ ಬರೆದಿರುವ ಸುದರ್ಶನ್. ಸಿದ್ದರಾಮಯ್ಯ ಕೋಲಾರ ಜಿಲ್ಲೆಯಲ್ಲಿ ಸ್ಪರ್ಧೆಯಿಂದ ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ಅನುಕೂಲ ಎಂಬ ಅಭಿಪ್ರಾಯ ಪಟ್ಟು ವಿ.ಆರ್ ಸುದರ್ಶನ್ ಪತ್ರ ಬರೆದಿರುವುದಾಗಿ ತಿಳಿದು ಬಂದಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ