ರೈತರಿಗೆ ಹುರುಪು ತುಂಬಿದ ಭತ್ತ-ಕಬ್ಬು !

19-09-2017 210
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಕಬ್ಬು ಬೆಳೆಗೆ ಹೇರಿದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭತ್ತ, ಕಬ್ಬು ಬೆಳೆಯಲು ರೈತರಿಗೆ ಅವಕಾಶ ನೀಡಲಾಗಿದೆ. ಈ ಮೊದಲು ಭತ್ತ ಮತ್ತು ಕಬ್ಬು ಬೆಳೆಯದಂತೆ ಜಲಾನಯನ ವ್ಯಾಪ್ತಿಯ ರೈತರಿಗೆ, ಸರ್ಕಾರ ನಿರ್ಬಂಧ ವಿಧಿಸಿತ್ತು. ಇದೀಗ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬೆಳೆಗೆ ಅವಕಾಶ ನೀಡಿದೆ. ಸರ್ಕಾರದ ಆದೇಶದಿಂದ ಜಲಾನಯನ ವ್ಯಾಪ್ತಿಯ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಒಂದು ಕಮೆಂಟನ್ನು ಹಾಕಿ