ಡೆಂಘಿಗೆ ಬಾಲಕಿ ಬಲಿ !

Kannada News

19-09-2017

ದೊಡ್ಡಬಳ್ಳಾಪುರ: ಡೆಂಘಿ ಮಹಾಮಾರಿಗೆ ನಾಲ್ಕು ವರ್ಷದ ಬಾಲಕಿಯೊಬ್ಬಳು ಬಲಿಯಾಗಿರುವ ದಾರುಣ ಘಟನೆಯು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಸಿದ್ದೇನಾಯಕನಹಳ್ಳಿಯ, ಲೋಕೇಶ್ ಮತ್ತು ಪವಿತ್ರ ದಂಪತಿಯ ಪುತ್ರಿ ಮಧುಮಿತ(4) ಮೃತ ಬಾಲಕಿ. ಕಳೆದ ಭಾನುವಾರ ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಿಕಿಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾಳೆ. ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಲೋಕೇಶ್ ಹಣ ಸಂಗ್ರಹ ಮಾಡಿ ಮೃತರ ಕುಟುಂಬಕ್ಕೆ, ಪೌರ ಕಾರ್ಮಿಕರು ನೆರವಾಗಿದ್ದರು, ಸುಮಾರು 10 ಸಾವಿರ ರೂಪಾಯಿಗಳನ್ನು ಪೌರಕಾರ್ಮಿಕರು ಸಹಾಯಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಬಾಲಕಿಯನ್ನು ಕಳೆದುಕೊಂಡ ತಂದೆ-ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ