ಓಡಾಡುವ ಜಾಗಕ್ಕಾಗಿ ಕೊಲೆ

Kannada News

19-09-2017

ಮಂಡ್ಯ: ಕ್ಷುಲ್ಲಕ ವಿಚಾರಕ್ಕೆ ನೆರೆಹೊರೆಯ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದು, ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಿಟ್ಟೂರು ಹೊಸದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ನಾಗರಾಜು(45)ಪಕ್ಕದ ಮನೆಯ ನಿವಾಸಿ ಚಲುವರಾಜು ಎಂಬಾತ, ಮರದ ಪೀಸು ಮತ್ತು ಚೂರಿಯಿಂದ ಹಲ್ಲೆ ನಡೆಸಿ ಕೊಲೆಗೈದಿದ್ದು, ಬಿಡಿಸಲು ಬಂದ ನಾಗರಾಜು ಪತ್ನಿ ಗೌರಮ್ಮ ಹಾಗೂ ಆತನ ಮಗ ನಾರಾಯಣಸ್ಬಾಮಿ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.

ಘಟನೆ ಎರಡು ಕುಟುಂಬಗಳ ನಡುವೆ ಓಡಾಡುವ ಜಾಗದ ವಿಚಾರವಾಗಿ ಜಗಳ ನಡೆದಿದ್ದು, ಜಗಳ ವಿಕೋಪಕ್ಕೆ ತಿರುಗಿ ಎರಡು ಕುಟುಂಬದವರು ಪರಸ್ಪರ ಕೈ ಕೈ ಮಿಲಾಯಿಸಿ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ  ತಾಯಿ-ಮಗನನ್ನು ಸ್ಥಳೀಯರು ಮಳವಳ್ಳಿ, ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಮಳವಳ್ಳಿ ಡಿವೈಎಸ್ಪಿ ಮಲ್ಲಿಕ್ ಸೇರಿದಂತೆ ಇನ್ನಿತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಕೊಲೆಗೈದ ಆರೋಪಿ ಚಲುವರಾಜನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಹಲಗೂರು ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

ಮಂಡ್ಯ ಓಡಾಡುವ ಜಾಗಕ್ಕಾಗಿ ಕೊಲೆ !


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ