ಕಾಂಗ್ರೆಸ್ ಶಕುನಿ ರಾಜಕಾರಣ ಮಾಡುತ್ತಿದೆ !

Kannada News

19-09-2017 564

ಮಂಗಳೂರು: ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರಿನ ಕೇಂದ್ರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ರೈಲು ನಿಲ್ದಾಣದಲ್ಲಿ ರಿಕ್ಷಾ ಚಾಲಕರು ಮತ್ತು ಪ್ರವಾಸಿ ಕಾರು ಚಾಲಕರು ಅಲ್ಲಿನ ಸಮಸ್ಯೆಗಳ ಬಗ್ಗೆ ಸಂಸದರ ಗಮನಕ್ಕೆ ತಂದರು. ಈ ವೇಳೆ ರೈಲ್ವೆ ಅಧಿಕಾರಿಗಳು ಸಂಸದರ ಜೊತೆಗಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಸೆಪ್ಟೆಂಬರ್ 28 ರಂದು ಸಭೆ ಕರೆದು ಇಲ್ಲಿರುವ ಎಲ್ಲಾ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು, ಈ ಸಭೆಯಲ್ಲಿ ಜಿಲ್ಲಾಧಿಕಾರಿ, ಆರ್.ಟಿ.ಒ ಅಧಿಕಾರಿಗಳು, ಮೇಯರ್ ಹಾಗೂ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಇದೇ ವೇಳೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ನಾಯಕರ ಫೋನ್ ಕದ್ದಾಲಿಕೆ ಮಾಡುವ ಮೂಲಕ, ಕಾಂಗ್ರೆಸ್ ಸರಕಾರ ಶಕುನಿ ರಾಜಕಾರಣ ಮಾಡುತ್ತಿದೆ, ಇದು ನಾಚಿಕೆಗೇಡಿನ ವಿಷಯ ಎಂದು ಹರಿಹಾಯ್ದರು. ಇದು ಕಾಂಗ್ರೆಸ್ಸಿನ ದ್ವೇಷದ ರಾಜಕಾರಣಕ್ಕೆ ಸಾಕ್ಷಿ ಎಂದರು.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ