ಚಾಮುಂಡಿ ಬೆಟ್ಟ: ವಾಹನಗಳಿಗೆ ಬ್ರೇಕ್ !

Kannada News

19-09-2017 294

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ-2017, ಮಹೋತ್ಸವ ಹಿನ್ನಲೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಯ್ದ ಕೆಲದಿನಗಳ ಕಾಲ ಸಾರ್ವಜನಿಕರ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಚಾಮುಂಡಿ ಬೆಟ್ಟದ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ತಪ್ಪಿಸಲು ಸಾರ್ವಜನಿಕರ ವಾಹನಗಳ ಪ್ರವೇಶ ನಿರಾಕರಿಸಿದೆ.

ಸೆಪ್ಟೆಂಬರ್ 22 ರಿಂದ 24ರ ವರೆಗೆ ಹಾಗೂ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 2ರವರೆಗೆ ಬೆಳಿಗ್ಗೆ 6 ರಿಂದ ರಾತ್ರಿ 9.30 ರವರೆಗೆ ಸಾರ್ವಜನಿಕರ ವಾಹನಗಳು ಚಾಮುಂಡಿ ಬೆಟ್ಟ ಪ್ರವೇಶಿಸದಂತೆ ಆದೇಶಿಸಲಾಗಿದೆ.

ಸಾರ್ವಜನಿಕರ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸುವ ದಿನಗಳಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಲಲಿತಮಹಲ್ ಹೆಲಿಪ್ಯಾಡ್ ನಿಂದ ಉಚಿತ ಸಾರಿಗೆ ಬಸ್ ಗಳ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಸಾರ್ವಜನಿಕರು ತಮ್ಮ ವಾಹನಗಳನ್ನು ಲಲಿತಮಹಲ್ ಹೆಲಿಪ್ಯಾಡ್ ಬಳಿ ನಿಲುಗಡೆ ಮಾಡಿ, ಸಾರಿಗೆ ಬಸ್ ಗಳಲ್ಲಿ ಉಚಿತವಾಗಿ ಹೋಗಿ ಬರಲು ವ್ಯವಸ್ಥೆ ಮಾಡಲಾಗುವುದು ಎಂದು, ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಎ.ಸುಬ್ರಹ್ಮಣ್ಯೇಶ್ವ ರಾವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ