ಸಿಲಿಂಡರ್ ಸ್ಪೋಟದಿಂದ ಗಾಯ !

Kannada News

19-09-2017

ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ಸ್ಫೋಟಿಸಿ ದಂಪತಿ, ಮಕ್ಕಳು ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ಸೋಮವಾರ ಬೆಳಿಗ್ಗೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮಿಪುರದಲ್ಲಿ ನಡೆದಿದೆ.

ಇಂದಿರಾನಗರದ ಲಕ್ಷ್ಮಿಪುರದ ನಿವಾಸಿ ಪ್ರಶಾಂತ್ ಎಂಬುವರ ಮನೆಯಲ್ಲಿ ಅಡುಗೆ ಅನಿಲ ಸೋರಿ ಈ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಈ ದುರಂತದಲ್ಲಿ ಮನೆಯಲ್ಲಿದ್ದ ಪ್ರಶಾಂತ್ ಮತ್ತು ಸಂಗೀತ ದಂಪತಿಗಳು ಹಾಗೂ ಅವರ ಮಕ್ಕಳಾದ ಪ್ರಭು, ನಂದ ಕಿಶೋರ್ ಇವರುಗಳಿಗೆ ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಎಲ್ಲರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಡುಗೆ ಅನಿಲ ಸಿಲಿಂಡರ್ ಸ್ಫೋಟಕ್ಕೆ ಕಾರಣಗಳೇನು ಎಂಬ ಬಗ್ಗೆ ಇಂದಿರಾ ನಗರ ಪೊಲೀಸರು ತನಿಖೆ ನಡೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ