ಲಾರಿ ಡಿಕ್ಕಿ ಇಬ್ಬರು ಬಲಿ !

Kannada News

19-09-2017

ಬೆಂಗಳೂರು: ನಗರದ ಚಂದಾಪುರ ಸಮೀಪದಲ್ಲಿರುವ ರೈಲ್ವೆ ಸೇತುವೆ ಬಳಿ ಬೈಕ್‍ ಗೆ ಲಾರಿಯೊಂದು ಡಿಕ್ಕಿ ಹೊಡೆದು, ಸ್ಥಳದಲ್ಲಿಯೇ ಇಬ್ಬರು ಬೈಕ್ ಸವಾರರು  ಸಾವನ್ನಪ್ಪಿರುವ ಘಟನೆ ಸೂರ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಆನೇಕಲ್ ತಾಲ್ಲೂಕಿನ ಚಂದಾಪುರದಲ್ಲಿ ರೈಲ್ವೆ ಬ್ರಿಡ್ಜ್ ಕೆಳಗೆ ಇಂದು ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದೆ. ವೆಂಕಟರಮಣಪ್ಪ(45) ಹಾಗೂ ವೆಂಕಟಪ್ಪ(43) ಮೃತ ದುರ್ದೈವಿಗಳಾಗಿದ್ದು, ಇವರು ರಾಮಸಾಗರ ನಿವಾಸಿಗಳು ಎಂದು ತಿಳಿದುಬಂದಿದೆ. ವೆಂಕಟಪ್ಪ ಮತ್ತು ನಾರಾಯಣಪ್ಪ ಅವರು ದ್ವಿಚಕ್ರ ವಾಹನದಲ್ಲಿ ಹಳೇ ಚಂದಾಪುರದಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದ್ದು, ಇಬ್ಬರ ದೇಹ ಲಾರಿ ಚಕ್ರಕ್ಕೆ ಸಿಲುಗಿ ದೇಹ ನಜ್ಜುಗುಜ್ಜಾಗಿ ಇಬ್ಬರು ವ್ಯಕ್ತಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು  ತಿಳಿಸಿದ್ದಾರೆ. ಸೂರ್ಯ ಸಿಟಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ