ಪ್ರಾಣಾಪಾಯದಿಂದ ಪಾರಾದ ವಿಶ್ವನಾಥ್ ಪುತ್ರ !

Kannada News

20-09-2017

ಮೈಸೂರು: ಮಾಜಿ ಸಂಸದ ಎಚ್.ವಿಶ್ವನಾಥ್ ಅವರ ಪುತ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಘಟನೆಯು ಕಳೆದ ತಡರಾತ್ರಿ ನಡೆದಿದೆ. ಅಪಘಾತದಲ್ಲಿ ಮಾಜಿ ಸಂಸದರ ಪುತ್ರ ಪೂರ್ವಜ್ ವಿಶ್ವನಾಥ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳೆದ ತಡರಾತ್ರಿ ಪೂರ್ವಜ್ ಅವರು ಪ್ರಯಾಣಿಸುತ್ತಿದ್ದ ಕಾರು-ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ಪಟ್ಟಣದ ಹೊರವಲಯದಲ್ಲಿರುವ ಬಸವೇಶ್ವರ ದೇವಾಲಯ ಬಳಿ ನಡೆದಿದೆ. ಕಾರ್ಯನಿಮಿತ್ತ ಚಂದಗಾಲು ಗ್ರಾಮಕ್ಕೆ ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಆಲೂಗಡ್ಡೆ ತುಂಬಿದ್ದ ಗೂಡ್ಸ್ ಆಟೋಗೆ ಪೂರ್ವಜ್ ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿಯಾಗಿದೆ. ಇನ್ನು ಅಪಘಾತದಲ್ಲಿ ಎರಡೂ ವಾಹನಗಳು ಸಂಪೂರ್ಣ ಜಖಂಗೊಂಡಿವೆ. ಅರಕಲಗೂಡು ಮಂಜುನಾಥ್ ಎಂಬವರಿಗೆ ಸೇರಿದ ಆಟೋ ಎಂದು ತಿಳಿದು ಬಂದಿದ್ದು, ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ, ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಕೆ.ಆರ್.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ