ಮಳೆ ಅನಾಹುತ: ಧರೆಗುರುಳಿದ ಮರ !

Kannada News

20-09-2017

ಧಾರವಾಡ: ಧಾರವಾಡದಲ್ಲಿಂದು ಸುರಿದ ಮಳೆ, ಅನಾಹುತಗಳನ್ನು ಸೃಷ್ಟಿಸಿದೆ. ಬೆಳ್ಳಂಬೆಳಿಗ್ಗೆ ಸುರಿದ ಭಾರೀ ಮಳೆಗೆ ಹಲವೆಡೆ ಮರಗಳು ಧರೆಗುರಳಿವೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಮರವೊಂದು ಧರೆಗುರುಳಿದ್ದು, ಮರದಿಂದ ರಸ್ತೆ ಸಂಚಾರ ಸ್ಥಗಿತಗೊಂಡಿದೆ, ಇದರಿಂದ ವಾಹನ ಸವಾರರು ಪರದಾಡಬೇಕಾಯಿತು. ಅಲ್ಲದೇ ಮರ ಬಿದ್ದ ಸ್ಥಳದಲ್ಲಿ ವಿದ್ಯುತ್ ಕಂಬವಿದ್ದು, ಪಕ್ಕದಲ್ಲಿ ಉರುಳಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಇನ್ನು ಹುಬ್ಬಳ್ಳಿ-ಧಾರವಾಡ ಪಾಲಿಕೆ ನೌಕರರು ಮರ ತೆರವು ಕರ್ಯದಲ್ಲಿ ತೊಡಗಿದ್ದಾರೆ. ಮತ್ತು ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಸೂಚಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

ಧಾರವಾಡ ಭಾರೀ ಮಳೆ ಧರೆಗುರುಳಿದ ಮರ !


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ