ತಪ್ಪಿದ ಭಾರೀ ಅನಾಹುತ !

Kannada News

20-09-2017

ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಬಳಿ ಟ್ರಕ್ ಹಾಗೂ ಗ್ಯಾಸ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಇಬ್ಬರು ಚಾಲಕರು ಪ್ರಾಣಾಯಾಯದಿಂದ ಪಾರಾಗಿದ್ದು, ಗಂಭೀರಗಾಯಗಳಾಗಿವೆ. ಜಿಲ್ಲೆಯ ಅರೆಬೈಲು ಘಟ್ಟದಲ್ಲಿ ಘಟನೆ ನಡೆದಿದೆ. ಅಂಕೋಲಾದಿಂದ‌ ಹುಬ್ಬಳಿ ಕಡೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್, ಹುಬ್ಬಳ್ಳಿಯಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ಟ್ರಕ್ ಮುಖಾಮುಖಿ ಡಿಕ್ಕಿಯಾಗಿವೆ. ಗಾಯಾಳು ಚಾಲಕರನ್ನು ಯಲ್ಲಾಪುರ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಗ್ಯಾಸ್ ಟ್ಯಾಂಕರ್, ಉರುಳಿ ಬೀಳುವುದು ಮತ್ತಿತರ ಯಾವುದೇ ಸಮಸ್ಯೆಯಾಗದಿದ್ದು. ಭಾರೀ ಅನಾಹುತ ತಪ್ಪಿದಂತಾಗಿದೆ. ಘಟನಾ ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ