ಜಟಕಾಬಂಡಿ ಮೇಲೆ ಕುಳಿತು ಪ್ರತಿಭಟನೆ !

Kannada News

20-09-2017 211

ರಾಮನಗರ: ಒಂದು ತಿಂಗಳಿಗೆ ನಾಲ್ಕರಿಂದ ಐದು ಬಾರಿ ಪೆಟ್ರೋಲ್ ದರ ಏರಿಕೆ ಖಂಡಿಸಿ ರಾಮನಗರದ ಐಜೂರು ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಎನ್.ಎಸ್.ಯು.ಐ ಸಂಘಟನೆಯ ಕಾರ್ಯಕರ್ತರು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ, ಜಟಕಾಬಂಡಿ ಹಾಗೂ ಸೈಕಲ್ ಮೇಲೆ ಕುಳಿತು ವಿನೂತನವಾಗಿ ಪ್ರತಿಭಟಿಸಿದ್ದಾರೆ. ಅಲ್ಲದೇ ಐಜೂರು ಸರ್ಕಲ್ ಬಳಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ತಿಂಗಳಲ್ಲಿ ಐದಾರು ಬಾರಿ ಪೆಟ್ರೋಲ್ ಬೆಲೆ ಏರಿಕೆ ಕ್ರಮಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ. ಇದು ಗ್ರಾಹಕರ ಮೇಲೆ ಹೊರೆಯಾಗುತ್ತಿದ್ದು ಈ ಕುರಿತು ಸೂಕ್ತವಾಗಿ ಪರಿಶೀಲಿಸುವಂತೆ ಆಗ್ರಹಿಸಿದ್ದಾರೆ.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ