ಬಿಜೆಪಿ ಅಧಿಕಾರಕ್ಕೆ ಬರೋದಿಲ್ಲ..?

Kannada News

20-09-2017

ಕೋಲಾರ: ಕೋಲಾರದ ನೂತನ ಜಿಲ್ಲಾಡಳಿತ ಭವನ ಸೇರಿದಂತೆ ವಿವಿಧ ಕಾಮಗಾರಿಗಳಿಗೆ, ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೋಲಾರ ತಾಲ್ಲೂಕಿನ ಕುಂಬಾರಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸಚಿವರಾದ ಉಮಾಶ್ರೀ, ಕೃಷ್ಣ ಬೈರೇಗೌಡ, ರಮೇಶ್ ಕುಮಾರ್, ಬಸವರಾಜ ರಾಯರೆಡ್ಡಿ, ಕಾಗೋಡು ತಿಮ್ಮಪ್ಪ ಹಾಗೂ ಜಿಲ್ಲೆಯ ಶಾಸಕರು ಕಾರ್ಯಕ್ರಮ ದಲ್ಲಿ ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಡಿಯೂರಪ್ಪ ತಿಪ್ಪರಲಾಗ ಹಾಕಿದ್ರೂ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದಿಲ್ಲ. 150 ಸೀಟುಗಳು ಬರುತ್ತೆ ಅಂತಾ ಜೇಬಿನಲ್ಲಿ ಚೀಟಿ ಇಟ್ಟುಕೊಂಡು ರಾಜ್ಯದಲ್ಲಿ ಓಡಾಡ್ತಾಯಿರಲಿ ಎಂದು ವ್ಯಂಗವಾಡಿದರು. ಯಡಿಯೂರಪ್ಪನ ಮೇಲೆ ಸುಪ್ರೀಂಕೊರ್ಟ್, ಹೈಕೋರ್ಟ್ ನಲ್ಲಿ ಸಾಕಷ್ಟು ಕೇಸುಗಳು ಇವೆ. ನಮ್ಮ ಕುಟುಂಬದವರ ಮೇಲೆ ಏನಂತ ಚಾರ್ಜ್ ಶೀಟ್ ಬಿಡುಗಡೆ ಮಾಡ್ತಾರೆ, ಸುಳ್ಳು ಹೇಳೋದನ್ನ ಬಿಟ್ಟು, ಏನು ಬಿಡುಗಡೆ ಮಾಡುತ್ತಾರೋ ಮಾಡಲಿ ಅದಕ್ಕಾಗಿಯೇ ನಾನು ಕಾಯ್ತಾಯಿದ್ದೇನೆ ಎಂದರು.

ಇನ್ನು ಫೋನ್ ಕದ್ದಾಲಿಕೆ ವಿಚಾರವಾಗಿ ಮಾತನಾಡಿ, ಫೋನ್ ಕದ್ದಾಲಿಕೆ ಮಾಡೋದು ಬಿಜೆಪಿ ಕೆಲಸ ನಮ್ಮದಲ್ಲ. ನಮ್ಮ ಮಂತ್ರಿಗಳು, ಅಧಿಕಾರಿಗಳ ಫೋನ್ ಕದ್ದಾಲಿಕೆ ಮಾಡ್ತಾಯಿರೋದು ಬಿಜೆಪಿಯವರು ಎಂದು ತಿರುಗೇಟು ನೀಡಿದರು. ಕೋಲಾರದಲ್ಲಿ ರೈಲ್ವೆ ಕೋಚ್ ಫ್ಯಾಕ್ಟರಿ ನಿರ್ಮಾಣಕ್ಕೆ ಕೇಂದ್ರ ರೈಲ್ವೆ ಇಲಾಖೆ ಸಹಕಾರ ಕೊಡ್ತಾಯಿಲ್ಲ ಎಂದು ಇದೇ ವೇಳೆ ತಿಳಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ