ಹಿರಿಯ ಪತ್ರಕರ್ತ ಬಿ.ವಿ.ವೀರಭದ್ರಪ್ಪ ನಿಧನ !

Kannada News

21-09-2017

ದಾವಣಗೆರೆ: ಹಿರಿಯ ಸಾಹಿತಿ ಹಾಗೂ ಪತ್ರಕರ್ತ ಬಿ.ವಿ.ವೀರಭದ್ರಪ್ಪ (83) ನಿಧನರಾಗಿದ್ದಾರೆ. ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಬೆಳಿಗ್ಗೆ 3.30 ಕ್ಕೆ ದಾವಣಗೆರೆ ನಗರದ ಖಾಸಗಿ ಆಸ್ಪತ್ರೆ ಯಲ್ಲಿ ನಿಧನರಾದರು. ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಎರಡು ದಶಕಗಳ ಕಾಲ ಲಂಕೇಶ್ ಪತ್ರಿಕೆ ಪ್ರತಿನಿಧಿ ಹಾಗೂ 100 ಹೆಚ್ಚು ಕೃತಿಗಳನ್ನ ರಚಿಸಿದ್ದ ವೀರಭದ್ರಪ್ಪ ಪತ್ರಿಕೋದ್ಯಮದಲ್ಲಿ ಗಮನ ಸೆಳೆದಿದ್ದರು.

ಸಂಜೆ ವೇಳೆಗೆ  ಅವರ ಆಶಯದಂತೆ ನಗರದ ಜೆ.ಜೆ.ಎಂ ವೈದ್ಯಕೀಯ ಕಾಲೇಜಿಗೆ ದೇಹ ದಾನ ಮಾಡಲಾಗುವು ಎಂದು ಕುಟುಂಬ ಮೂಲಗಳು ತಿಳಿಸಿವೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ