ತಂದೆ ಸಾವು: ಮಗನ ಆತ್ಮಹತ್ಯೆ !

Kannada News

21-09-2017

ಕೋಲಾರ: ತಂದೆ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ಯುವಕ ನೇಣು ಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೋಲಾರ ತಾಲ್ಲೂಕಿನ ಮುದವತ್ತಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಛತ್ರಕೋಡಿಹಳ್ಳಿ ನಿವಾಸಿ ನಾಗೇಶ್ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಕಳೆದ ಕೆಲವು ದಿನಗಳ ಹಿಂದೆ ತಂದೆ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ. ಕಳೆದ ರಾತ್ರಿ ಗ್ರಾಮದ ಸಮೀಪ ಇರುವ ಹುಣಸೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

ಕೋಲಾರ ತಂದೆ ಸಾವು ಮಗ ಆತ್ಮಹತ್ಯೆ !


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ