ಸರ್ಕಾರಿ ಕಾರ್ಯಕ್ರಮ: ಜನರಿಗೇಕೆ ತೊಂದರೆ..?

Kannada News

22-09-2017 401

ಕೊಪ್ಪಳ: ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಶಂಕು ಸ್ಥಾಪನೆ ಹಾಗೂ ಉದ್ಘಾಟನೆಗಾಗಿ ಇಂದು ಕೊಪ್ಪಳ ಜಿಲ್ಲೆಗೆ ಸಿ.ಎಂ.ಸಿದ್ದರಾಮಯ್ಯ ಆಗಮಿಸುತ್ತಿದ್ದಾರೆ. ಜಿಲ್ಲೆಯ ಕುಷ್ಟಗಿ ಮತ್ತು ಯಲಬುರ್ಗಾ ತಾಲೂಕಿನ ಗ್ರಾಮಗಳಿಗೆ 763 ಕೋಟಿ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ, ಹಾಗು ಜಿಲ್ಲೆಯ ಯಲಬುರ್ಗಾ ಮತ್ತು ಕೊಪ್ಪಳ ತಾಲ್ಲೂಕಿನ ಆಯ್ದ ಕೆರೆಗಳಿಗೆ 290 ಕೋಟಿ ರೂ. ವೆಚ್ಚದಲ್ಲಿ ತುಂಗಭದ್ರಾ ನದಿಯ ನೀರನ್ನು ತುಂಬಿಸುವ ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ. 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಕಟ್ಟಡದ ಉದ್ಘಾಟನೆ,  ಸೇರಿದಂತೆ ಒಟ್ಟು 1500 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಸರಕಾರದ ವಿವಿಧ ಯೊಜನೆಗಳ ಫಲಾನುಭವಿಗಳೊಂದಿಗೆ ಸಂವಾದ ಕೂಡಾ ಏರ್ಪಡಿಸಲಾಗಿದೆ, ಈ ಹಿನ್ನಲೆಯಲ್ಲಿ ವಿವಿಧ ಹಳ್ಳಿಗಳಿಂದ ಫಲಾನುಭವಿಗಳು ಬರಲು ಸಾವಿರಕ್ಕೂ ಅಧಿಕ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ. ಇನ್ನು ಜಿಲ್ಲೆಯ ಎಲ್ಲ ಬಸ್ಸುಗಳು ಕೂಡಾ ರಿಸರ್ವ ಆದ ಹಿನ್ನಲೆಯಲ್ಲಿ ಬೇರೆ ಬೇರೆ ಊರುಗಳಿಗೆ ಪ್ರಯಾಣಿಕರು ಹೊಗಲು ಬಸ್ಸುಗಳೇ ಇಲ್ಲದಂತಾಗಿ ಪ್ರಯಾಣಿಕರು ಪರದಾಡುತ್ತಿದ್ದಾರೆ. ಇನ್ನು ಬೇರೆ ಬೇರೆ ಹಳ್ಳಿಗಳಿಂದ ಶಾಲಾ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು ಕೂಡಾ ಬಸ್ಸುಗಳಿಲ್ಲದೇ ಪರದಾಡುತ್ತಿದ್ದಾರೆ. ಸರಕಾರದ ಕಾರ್ಯಕ್ರಮದ ಹೆಸರಿನಲ್ಲಿ ಪ್ರಯಾಣಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆ ಕೊಡುವದು ಎಷ್ಟರ ಮಟ್ಟಿಗೆ ಸರಿ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ